Mysore
20
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಹನುಮ ಧ್ವಜ ಕೆಳಗಿಳಿಸಿದ ಪೊಲೀಸರು: ಕೆರೆಗೋಡು ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್‌

ಮಂಡ್ಯ: ಜಿಲ್ಲೆಯ ಕೆರೆಗೋಡು 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದು, ಇದರಿಂದ ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತದ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನ ತಿರುಗಿಬಿದ್ದಿದ್ದಾರೆ. ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಧುಮುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರಗೋಡಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಸ್ಥಳದಲ್ಲಿ ನೂರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದೆ.

ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಪರಿಸ್ಥಿತಿಯನ್ನ ತಿಳಿಗೊಳಿಸಲು ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ ಶ್ರೀರಾಮನ ಬ್ಯಾನರ್ ಕಿತ್ತು ಹಾಕಿದ್ದಾರೆ. ಬೃಹತ್ ಧ್ವಜಸ್ತಂಬವನ್ನು ಕಟ್ ಮಾಡೋದಕ್ಕೆ ಗ್ಯಾಸ್‌ಕಟ್ಟರ್ ತರಿಸಿದ್ದಾರೆ.

ಪೊಲೀಸರ ನಡೆಗೆ ಗ್ರಾಮಸ್ಥರು, ಹಿಂದೂ ಕಾರ್ಯಕರ್ತರು, ಮಹಿಳೆಯರು ಶಾಪ ಹಾಕಿದ್ದಾರೆ. ಕಣ್ಣೀರಿಟ್ಟು, ಬಾಯಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಶಾಸಕ ಗಣಿಗ ರವಿ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಶಾಸಕರ ಕುಮ್ಮಕ್ಕಿನಿಂದ ಈ ರೀತಿ ಕೆಲಸವಾಗ್ತಿದೆ ಎಂದು ಕಿಡಿ ಕಾರಿದ್ದಾರೆ.

ಹನುಮ ಧ್ವಜ ಇಳಿಸಿದ್ದರ ವಿರುದ್ಧ ಆಕ್ರೋಶ ಹೊರಹಾಕಿದ ಕೆರೆಗೋಡು ಗ್ರಾಮಸ್ಥರು ಮಂಡ್ಯ-ಯಡಿಯೂರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೈ ಶಾಸಕ ಗಣಿಗ ರವಿಕುಮಾರ್ ಫ್ಲೆಕ್ಸ್ ಹರಿದು, ಒಲೆ ಹಚ್ಚಿ, ರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!