ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ.
ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿ ನೀರು ಬಿಡುಗಡೆಗೆ ತೀರ್ಮಾನಿಸಿ ಜುಲೈ ೮ ರಿಂದ ೧೫ ರವರೆಗೆ ನೀರು ಬಿಡುಗಡೆ ಮಾಡುವುದಾಗಿ ತಿಳಿಸಲಾಗಿತ್ತು.
ಆದರೆ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿಯಿಂದ ನೀರು ಬಿಡುಗಡೆ ತಡವಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಯಂತ್ರೋಪಕರಣಗಳು ಇದ್ದು, ಯಂತ್ರೋಪಕರಣಗಳನ್ನ ನಾಲೆಯಿಂದ ತೆರವುಗೊಳಿಸಿದ ಬಳಿಕ ಅಂದರೆ ಬುಧವಾರದಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ ಇದೆ.