ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ.
ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ ಭೇಟಿ ನೀಡಿದ ಮಾಜಿ ಸಚಿವ ನಾರಾಯಣ ಗೌಡ ಅವರು, ರೈತರ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ಅವರು, ಹೇಮಾವತಿ ಜಲಾಶಯದಲ್ಲಿ ಸಾಕಷ್ಟು ನೀರಿದೆ. ನೆರೆಯ ತುಮಕೂರು ಜಿಲ್ಲೆಗೆ ನೀರು ಸರಾಗವಾಗಿ ಹರಿದು ಹೋಗುತ್ತಿದೆ. ಆದರೆ ಹೇಮಾವತಿ ನದಿಯ ದಂಡೆಯಲ್ಲಿರವ ತಾಲ್ಲೂಕಿನ ಕೆರೆ-ಕಟ್ಟೆ ತುಂಬಿಸಲು ನೀರಾವರಿ ಇಲಾಖೆಯ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.
ಈ ಬಾರಿ ಬೆಳೆ ಕಾಪಾಡಿಕೊಳ್ಳಲು ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಬೇಕು. ಇಲ್ಲದಿದ್ದರೆ ರೈತರ ಜೊತೆ ಸೇರಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.