ಮಂಡ್ಯ

ಅಧಿಕಾರ ಹಂಚಿಕೆ ಚರ್ಚೆ : ಹೈಕಮಾಂಡ್‌ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ; ಸಚಿವ ಚಲುವರಾಯಸ್ವಾಮಿ

ಮದ್ದೂರು : ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಪಕ್ಷದ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ತಾಲ್ಲೂಕಿನ ಕೊಪ್ಪ ಹೋಬಳಿಯ ಕೌಡ್ಲೆ ಗ್ರಾಮದಲ್ಲಿ ೫೦ ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಹೈಕಮಾಂಡ್‌ಗಳಾಗಿದ್ದು, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ, ವೇಣುಗೋಪಾಲ್, ಸುರ್ಜೆವಾಲಾ ರಾಷ್ಟ್ರ ಮಟ್ಟದ ಹೈಕಮಾಂಡ್‌ಗಳಾಗಿದ್ದಾರೆ. ಯಾವುದೇ ಗೊಂದಲವಿಲ್ಲದೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಓದಿ: ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ : ಶಾಸಕ ಬೇಳೂರು ಗೋಪಾಲಕೃಷ್ಣ

ವಿರೋಧ ಪಕ್ಷದವರು ಯಾವುದೇ ವಿಚಾರಗಳಿಲ್ಲದ ಕಾರಣ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರೆಲ್ಲರ ಅನಿಸಿಕೆಗಳು ಹುಸಿಯಾಗಲಿವೆ ಎಂದು ಹೇಳಿದರು.

ಮೆಕ್ಕೆಜೋಳ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡದ ಕಾರಣ ಹಲವು ಸಮಸ್ಯೆಗಳಿಗೆ ಕಾರಣವಾಗಿದ್ದು ಇದರ ಜತೆಯಲ್ಲಿಯೇ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ಹಣ ನೀಡುವುದರ ಜತೆಗೆ ಕೆಎಂಎಫ್ ಮೂಲಕ ಒಂದು ಲಕ್ಷ ಟನ್ ಮೆಕ್ಕೆಜೋಳವನ್ನು ಖರೀದಿ ಮಾಡಲು ಕ್ರಮ ವಹಿಸಿದೆ. ಡಿಸ್ಟಲರಿಗೆ ೮ ಲಕ್ಷ ರೂ. ಖರೀದಿಗೂ ಮುಂದಾಗಿದ್ದು ಕೇಂದ್ರ ಸರ್ಕಾರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ತಾ.ಪಂ. ಉಪಾಧ್ಯಕ್ಷ ಬಿ.ಎಂ.ರಘು, ಗ್ರಾ.ಪಂ.ಅಧ್ಯಕ್ಷ ಜಿ.ಮನು, ಉಪಾಧ್ಯಕ್ಷೆ ರತ್ನಮ್ಮ, ಸದಸ್ಯರಾದ ಅಂಜನಾಕುಮಾರಿ, ಮಹಾಲಕ್ಷಿ , ಲೋಕೇಶ್, ಪುಟ್ಟಸ್ವಾಮಿ, ಇಂದ್ರಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ದಿವಾಕರ್, ಮುಖಂಡರಾದ ಕುಮಾರ್ ಕೊಪ್ಪ, ಕ್ರಾಂತಿ ಸಿಂಹ, ಶ್ರೀನಿವಾಸ್, ಕರಿಗೌಡ, ರಘುನಂದನ್, ಪಶು ಸಂಗೋಪನೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಡಾ.ಶಿವಲಿಂಗಯ್ಯ, ಸಹಾಯಕ ನಿರ್ದೇಶಕ ಡಾ.ಗೋವಿಂದು, ವೈದ್ಯರಾದ ಶ್ರೀನಿವಾಸ್, ಕಾರ್ತಿಕ್, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

5 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

5 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

6 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

6 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

7 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

7 hours ago