ಶ್ರೀರಂಗಪಟ್ಟಣ : ಕಿಲ್ಕಾರಿಯು ಗರ್ಭಿಣಿ, ಬಾಣಂತಿಯರಿಗೆ ಅನುಕೂಲವಾಗುವ ಮೊಬೈಲ್ ಆಧಾರಿತ ಉಚಿತ ಆರೋಗ್ಯ ಸೇವೆಯಾಗಿದ್ದು, ಗರ್ಭಿಣಿ,ಬಾಣಂತಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು.
ತಾಲ್ಲೂಕಿನ ಬೆಳಗೊಳ ಗ್ರಾಮದ ಹಿರಿದೇವಿ ಬಡಾವಣೆಯ 3 ನೇಯ ಅಂಗನವಾಡಿ ಕೇಂದ್ರದಲ್ಲಿ ಜರುಗಿದ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗರ್ಭಿಣಿ, ಬಾಣಂತಿಯರನ್ನು ಉದ್ದೇಶಿಸಿ ಮಾತನಾಡಿದರು.
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗಿರುವ ಕಿಲ್ಕಾರಿ ಮೊಬೈಲ್ ಕರೆ ಸೇವೆ ಗರ್ಭಿಣಿಯರಿಗೆ ಗರ್ಭಧಾರಣೆ, ಹೆರಿಗೆ ಮತ್ತು ಮಕ್ಕಳ ಆರೈಕೆ ಬಗ್ಗೆ ಶಿಕ್ಷಣ ನೀಡಲು ಮೊಬೈಲ್ ಆಧಾರಿತ ಸೇವೆಯಾಗಿದೆ. ತಾಯಂದಿರು ಗರ್ಭಾವಸ್ಥೆಯಲ್ಲಿ ಮತ್ತು ಶೈಶಾವಸ್ಥೆಯಲ್ಲಿ ಅನುಸರಿಸಬೇಕಾದ ನಡಾವಳಿಗಳು ಮತ್ತು ಅಭ್ಯಾಸಗಳ ಬಗ್ಗೆ ತಿಳಿಸುವಂತದ್ದಾಗಿರುತ್ತದೆ ಎಂದು ತಿಳಿಸಿದರು.
ಅರೋಗ್ಯದ ಬಗ್ಗೆ ಮಾಹಿತಿಯನ್ನು ನೇರವಾಗಿ ಕುಟುಂಬಗಳ ಮೊಬೈಲ್ ಫೋನ್ ಗಳಿಗೆ ತಲುಪಿಸುವ ಭಾರತ ಸರ್ಕಾರದ ಉಚಿತ ಮೊಬೈಲ್ ಸೇವೆ ಆಗಿದೆ ಆದ್ದರಿಂದ ಗರ್ಭಿಣಿ, ಬಾಣಂತಿಯರು ಕಿಲ್ಕಾರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಈ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಟಿ.ಟಿ.ಜ್ಯೋತಿ, ಅಂಗನವಾಡಿ ಕಾರ್ಯಕರ್ತೆ ಸುನಿತಾ, ಆಶಾ ಕಾರ್ಯಕರ್ತೆ ಜಯಂತಿ, ಸಾವಿತ್ರಿ ಹಾಗೂ ಗರ್ಭಿಣಿಯರು, ಬಾಣಂತಿಯರು,ಮಕ್ಕಳ ತಾಯಂದಿರರು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…