ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮಳವಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಸೇರಿದಂತೆ ಹಲವರು ಹೂ ಗುಚ್ಛ ನೀಡುವ ಮೂಲಕ ಘನತೆವೆತ್ತ ರಾಷ್ಟ್ರಪತಿಗಳನ್ನು ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಉಪಸ್ಥಿತರಿದ್ದರು.





