Mysore
23
scattered clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ.

ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಕರ್ನಾಟಕ ಮತ್ತು ವಿಕಸಿತ ಭಾರತ ಗುರಿ ಸಾಧಿಸಲು ಇದರಿಂದ 9 ಸಂಕಲ್ಪಗಳು ಸಹಾಯವಾಗುತ್ತದೆ ಎಂದು ಹೇಳಿದರು.

ತಮ್ಮ ಆದ್ಯತೆಗಳನ್ನು ವಿವರಣೆ ನೀಡಿದ ಅವರು, ಆದ್ಯತೆಗಾಗಿ ನೀರಿನ ಸಂರಕ್ಷಣೆ ಮತ್ತು ಉತ್ತಮ ನೀರು ನಿರ್ವಹಣೆ ಬಗ್ಗೆ ಮಹತ್ವ ಸಾರಿದರು. ನಂತರ ತಾಯಿಯ ಹೆಸರಿನಲ್ಲಿ ಒಂದು ಮರ ಅಭಿಯಾನದಡಿ ಮರ ನೆಡುವುದು, ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು. ವೋಕಲ್‌ ಫಾರ್‌ ಲೋಕಲ್‌ ಮೂಲಕ ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವುದು, ದೇಶೀಯ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವುದು, ರಾಸಾಯನಿಕರಹಿತ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ಸಿರಿಧಾನ್ಯಗಳನ್ನು ಒಳಗೊಂಡ ಆರೋಗ್ಯಕರ ಆಹಾರ ಮತ್ತು ಕಡಿಮೆ ಎಣ್ಣೆ ಬಳಕೆಯನ್ನು ಉತ್ತೇಜಿಸುವಂತೆ ಕರೆ ನೀಡಿದರು.

ಇದರ ಜೊತೆಗೆ ಯೋಗ ಮತ್ತು ಫಿಟ್ನೆಸ್‌ನ್ನು ಅಳವಡಿಸಿಕೊಳ್ಳುವಂತೆ ಸೇವಾಭಾವವನ್ನು ಬೆಳೆಸುವಂತೆ ಕೂಡ ಅವರು ಮನವಿ ಮಾಡಿದರು.

Tags:
error: Content is protected !!