ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ.
ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಕರ್ನಾಟಕ ಮತ್ತು ವಿಕಸಿತ ಭಾರತ ಗುರಿ ಸಾಧಿಸಲು ಇದರಿಂದ 9 ಸಂಕಲ್ಪಗಳು ಸಹಾಯವಾಗುತ್ತದೆ ಎಂದು ಹೇಳಿದರು.
ತಮ್ಮ ಆದ್ಯತೆಗಳನ್ನು ವಿವರಣೆ ನೀಡಿದ ಅವರು, ಆದ್ಯತೆಗಾಗಿ ನೀರಿನ ಸಂರಕ್ಷಣೆ ಮತ್ತು ಉತ್ತಮ ನೀರು ನಿರ್ವಹಣೆ ಬಗ್ಗೆ ಮಹತ್ವ ಸಾರಿದರು. ನಂತರ ತಾಯಿಯ ಹೆಸರಿನಲ್ಲಿ ಒಂದು ಮರ ಅಭಿಯಾನದಡಿ ಮರ ನೆಡುವುದು, ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು. ವೋಕಲ್ ಫಾರ್ ಲೋಕಲ್ ಮೂಲಕ ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವುದು, ದೇಶೀಯ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವುದು, ರಾಸಾಯನಿಕರಹಿತ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ಸಿರಿಧಾನ್ಯಗಳನ್ನು ಒಳಗೊಂಡ ಆರೋಗ್ಯಕರ ಆಹಾರ ಮತ್ತು ಕಡಿಮೆ ಎಣ್ಣೆ ಬಳಕೆಯನ್ನು ಉತ್ತೇಜಿಸುವಂತೆ ಕರೆ ನೀಡಿದರು.
ಇದರ ಜೊತೆಗೆ ಯೋಗ ಮತ್ತು ಫಿಟ್ನೆಸ್‌ನ್ನು ಅಳವಡಿಸಿಕೊಳ್ಳುವಂತೆ ಸೇವಾಭಾವವನ್ನು ಬೆಳೆಸುವಂತೆ ಕೂಡ ಅವರು ಮನವಿ ಮಾಡಿದರು.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…