ಮಂಡ್ಯ

ಏಪ್ರಿಲ್.‌5ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಶ್ರೀಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.

ಮೋದಿ ಭೇಟಿಯ ಹಿನ್ನೆಲೆಯಲ್ಲಿ ಏಪ್ರಿಲ್.15ರಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ದೇವಾಲಯ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಶ್ರೀ ಕ್ಷೇತ್ರದಲ್ಲಿ ಡಾ.ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಏಪ್ರಿಲ್.‌10ರಿಂದ 15ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

1 min ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

4 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

8 mins ago

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

8 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

9 hours ago