ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಶ್ರೀಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ಮೋದಿ ಭೇಟಿಯ ಹಿನ್ನೆಲೆಯಲ್ಲಿ ಏಪ್ರಿಲ್.15ರಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ದೇವಾಲಯ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಶ್ರೀ ಕ್ಷೇತ್ರದಲ್ಲಿ ಡಾ.ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಏಪ್ರಿಲ್.10ರಿಂದ 15ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…