ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ.
ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾರ್ಷಿಕ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಮೋದಿ ಭಾಷಣ ಮಾಡಲಿದ್ದಾರೆ.
ಕಳೆದ ನವೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ಉಡುಪಿಗೆ ಭೇಟಿ ನೀಡಿದ್ದರು. ಅಲ್ಲಿ ಶ್ರೀಕೃಷ್ಣದ ದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿದ್ದ ಲಕ್ಷ ಕಂಠ ಗೀತ ಪಾರಾಯಣ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.





