Mysore
24
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಬೆಳ್ಳೂರು ಟೋಲ್ ಬಳಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಬೆಳ್ಳೂರು ಟೋಲ್ ಸಮೀಪ ಅಳವಡಿಸಲಾಗಿದ್ದ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಬೆಂಗಳೂರು ನಿವಾಸಿ ಕಸ್ತೂರಿ ಶಾನ್‌ಭಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!