ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಬೆಳ್ಳೂರು ಟೋಲ್ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಬೆಳ್ಳೂರು ಟೋಲ್ ಸಮೀಪ ಅಳವಡಿಸಲಾಗಿದ್ದ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಬೆಂಗಳೂರು ನಿವಾಸಿ ಕಸ್ತೂರಿ ಶಾನ್‌ಭಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…