ಮಂಡ್ಯ

ಎತ್ತಿನಗಾಡಿಗೆ ಖಾಸಗಿ ಬಸ್‌ ಡಿಕ್ಕಿ : ಎತ್ತು ಸಾವು

ಭಾರತಿನಗರ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸಾವನ್ನಪ್ಪಿ, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿರುವ ಘಟನೆ ಸಮೀಪದ ದೊಡ್ಡರಸಿನಕೆರೆ ಗೇಟ್ ಬಳಿ ಸಂಭವಿಸಿದೆ.

ದೊಡ್ಡರಸಿನಕೆರೆ ಗ್ರಾಮದ ಮಹದೇವು ಎಂಬವರಿಗೆ ಸೇರಿದ ಎತ್ತು ಸಾವನ್ನಪ್ಪಿದ್ದು, ಮತ್ತೊಂದು ಎತ್ತಿಗೆ ತೀವ್ರ ಗಾಯಗಳಾಗಿವೆ.

ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿ ಮದ್ದೂರು-ಮಳವಳ್ಳಿ ಹೆದ್ದಾರಿ ಮಾರ್ಗವಾಗಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಮಳವಳ್ಳಿ ಕಡೆಯಿಂದ ಬಂದ ಖಾಸಗಿ ಬಸ್ಸೊಂದು ಎತ್ತಿನ ಗಾಡಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಎತ್ತಿನ ಗಾಡಿ ರಸ್ತೆ ಪಕ್ಕದ ಜಮೀನಿಗೆ ಉರುಳಿಬಿದ್ದಿದೆ. ಬಸ್ಸು ಬರುತ್ತಿದ್ದುದ್ದನ್ನು ಕಂಡ ಎತ್ತಿನ ಗಾಡಿ ಸವಾರ ಪಕ್ಕದ ಜಮೀನಿಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ.

ಈ ಸಂಬಂಧ ಭಾರತೀನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago