ಮಂಡ್ಯ

ಕಾನೂನಿನ ರಕ್ಷಣೆ ಸಾರ್ವಜನಿಕ ಹೊಣೆ: ಮಂಜುಳಾ ಇಟ್ಟಿ

ಮಂಡ್ಯ: ಸಾರ್ವಜನಿಕರ ಅನುಕೂಲಕ್ಕಾಗಿ ರಚಿಸಿರುವಂತಹ ಕಾನೂನು  ದುರುಪಯೋಗವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಎಫ್‌ಟಿಎಸ್ ಸಿ-1 ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ  ಹೇಳಿದರು.

ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ  ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,  ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ,  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ವಕೀಲರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರಣ ಸಬಲೀಕರಣ ಇಲಾಖೆ ಇವರುಗಳ ಸಹಯೋಗದೊಂದಿಗೆ ನಡೆದ ‘ವಿಧಾನ್  ಸಮಾಧಾನ್ ‘ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗಾಗಿ ಬಹಳಷ್ಟು ಕಾನೂನುಗಳು, ಕಾಯ್ದೆಗಳು ಇವೆ. ಅವುಗಳನ್ನು ಪ್ರತಿಯೊಬ್ಬ ಮಹಿಳೆಯರು ಅರಿತು ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ತಿಳಿಯಬೇಕು ಎಂದರು.

ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯೂ ಬಹಳ ಮುಂದಿದ್ದು, ಸಮಾಜದಲ್ಲಿ ಉತ್ತಮ ಬೆಳವಣಿಗೆ ಆಗುತ್ತಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿದರೆ ಇಡೀ ಸಮಾಜವೇ ಬೆಳವಣಿಗೆ ಹೊಂದುತ್ತದೆ. ಕಾರ್ಯಗಾರದಲ್ಲಿ ಮಹಿಳೆಯರ ಭಾಗವಹಿಸುವಿಕೆ ಮುಖ್ಯವಾಗಿದ್ದು, ಕಾರ್ಯಗಾರದ ಉದ್ದೇಶವನ್ನು ತಿಳಿದುಕೊಳ್ಳಬೇಕು ಎಂದು ನುಡಿದರು.

ಲೈಂಗಿಕ ದೌರ್ಜನ್ಯ ಕಾಯ್ದೆ, ಅತ್ಯಾಚಾರ, ಅಪಹರಣ ಮುಂತಾದ ವಿಷಯಗಳಿಗೆ ಸಂಬಂಧಿಸಿದ ಕಾನೂನು ಕಾಯ್ದೆಗಳ ಬಗ್ಗೆ ನುರಿತ ವ್ಯಕ್ತಿಗಳಿಂದ ಕಾರ್ಯದಲ್ಲಿ ತಿಳಿಸಲಾಗುತ್ತದೆ. ಇದರ ಸದುಪಯೋಗ ಪಡೆದುಕೊಂಡು ನಿಮ್ಮ ಸುತ್ತಮುತ್ತಲಿನ ಜನರುಗಳಿಗೆ ತಿಳಿಸುವ ಕೆಲಸ ಮಾಡಿ ಎಂದು ಹೇಳಿದರು.

ಸಮಾಜ ಸುಸ್ಥಿತಿಗೆ ಹೆಣ್ಣು ಮಕ್ಕಳ ಸಹಕಾರ

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ  ಡಾ.ಎಚ್.ಎಲ್.ನಾಗರಾಜು,  ಸಮಾಜವನ್ನು ಸುಸ್ಥಿತಿಯಲ್ಲಿಡಲು ಹೆಣ್ಣು ಮಕ್ಕಳು ಸಹಕರಿಸಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಹೆಣ್ಣು ಬುದ್ದಿವಂತೆಯಾಗಿ ಬದುಕಿದರೆ ಮಾತ್ರ ಸಮಾಜ, ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ.   ಭಾರತೀಯ ಸಮಾಜ ಎಲ್ಲಾ ರೀತಿಯಲ್ಲಿಯೂ ಮಹಿಳೆಯರಿಗೆ ಗೌರವ ನೀಡುತ್ತದೆ ಎಂದರು.

ವಿಧಾನ್ ಸೆ ಸಮಾಧಾನ್ ಕಾರ್ಯಾಗಾರದ ಅಂಗವಾಗಿ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಿಗೆ ವಿಶೇಷವಾಗಿ ಸಾಮಾಜಿಕ, ಆರ್ಥಿಕ, ಔದ್ಯೋಗಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳನ್ನು ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಮತ್ತು ಇತರೆ ಕಾನೂನುಗಳ ಬಗ್ಗೆ ತಿಳಿದುಕೊಂಡು ನಿಮ್ಮ ಜ್ಞಾನದ ಅರಿವನ್ನು ಹೆಚ್ಚಿಸಿಕೊಳ್ಳಿ. ಇಂತಹ ಕಾರ್ಯಾಗಾರದ ಅವಶ್ಯಕತೆ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗಿದೆ ಎಂದರು.

ಹೆಣ್ಣು ತನ್ನ ಕುಟುಂಬ, ಸಮಾಜ ಹಾಗೂ ರಾಷ್ಟ್ರಕ್ಕೆ ಗೌರವವನ್ನು ನೀಡುತ್ತಾರೆ. ಅದರಂತೆ ಸಮಾಜದಲ್ಲಿ ನಡೆಯುತ್ತಿರುವ ಶಿಶು ಭ್ರೂಣ ಹತ್ಯೆ ಹಾಗೂ ಬಾಲ್ಯ ವಿವಾಹವನ್ನು ತಡೆಗಟ್ಟಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ ನೀಡಿ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.

12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರು ತಮ್ಮ ಅನುಭವ ಮಂಟಪದಲ್ಲಿ ಕಾಯಕ ತತ್ವವನ್ನು ಪ್ರಚಾರ ಮಾಡುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶವನ್ನು ಕೊಟ್ಟಿದ್ದರು ಎಂದರು.

ಬ್ರಿಟಿಷರ ಪಾಶ್ಚಿಮಾತ್ಯ ಶಿಕ್ಷಣವನ್ನು ನಮ್ಮ ದೇಶಕ್ಕೆ ಪರಿಚಯಿಸಿದ ಸಲುವಾಗಿ ರಾಜಾರಾಮ್ ಮೋಹನ್ ರಾಯ್ ರವರು ಬ್ರಿಟಿಷರ ಆಡಳಿತದೊಳಗೆ ಇದ್ದುಕೊಂಡು ಅಂದಿನ ಕಾಲದಲ್ಲಿ ಇದ್ದಂತಹ ಅನಿಷ್ಟ ಪದ್ದತಿಯಾದ ಸತಿ ಸಹಗಮನ ಪದ್ಧತಿಯನ್ನು ನಿಷೇಧಿಸಿದರು. ಜೊತೆಗೆ ಬಾಲ್ಯ ವಿವಾಹ ನಿಷೇಧ ಅಂತರ್ಜಾತಿ ವಿವಾಹ ಹಾಗೂ ವಿಧವಾ ವಿವಾಹಕ್ಕೆ ಪ್ರೋತ್ಸಾಹಿಸಿದರು. ಕಾಲ ಕಳೆದಂತೆ ಮಹಿಳೆಯರಿಗೆ ಮತದಾನದ ಹಕ್ಕು ಕೂಡ ದೊರೆಯಿತು ಎಂದರು.

ಕಾರ್ಯಗಾರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago