ಮಂಡ್ಯ : ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂವಿಧಾನ ಸೇನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಜಿ.ಟಿ.ದೇವೇಗೌಡ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಂತೆಯೇ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಅವರ ಭಾವಚಿತ್ರವನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ವಿಧಾನಸಭೆ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಅಧಿವೇಶನದಲ್ಲಿ ಸಹಕಾರ ಮಸೂದೆಯನ್ನು ಸರ್ಕಾರವು ಮಂಡಿಸಿದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಿರುವ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅವರು ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವ ಮೂಲಕ ಸಹಕಾರ ಕ್ಷೇತ್ರವನ್ನು ಮುಳುಗಿಸಿಬಿಡಿ, ಸರ್ವನಾಶ ಮಾಡಿಬಿಡಿ ಎಂದು ಮಾತನಾಡಿದ್ದಾರೆ. ಇದರಿಂದ ರಾಜ್ಯದ ಬಹು ಸಂಖ್ಯಾತರಾದ ದಲಿತ ವರ್ಗಕ್ಕೆ ಮಾನಹಾನಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತರಿಗೆ ಪ್ರಾತಿನಿಧ್ಯ ನೀಡಿದರೆ ಸಹಕಾರ ಕ್ಷೇತ್ರ ಸರ್ವನಾಶವಾಗುವುದೆ ಎಂದರಲ್ಲದೆ, ದಲಿತರ ಬಗೆಗೆ ಈ ರೀತಿಯ ಕೀಳು ಮನೋಭಾವನೆಯನ್ನು ಹೊಂದಿರುವ ಮೂಲಕ ಸಮುದಾಯವನ್ನು ಅವಮಾನ ಮಾಡಿರುವ ಶಾಸಕ ಜಿ.ಟಿ.ದೇವೇಗೌಡರ ವಿರುದ್ಧ ಮೊಕದ್ದಮೆ ದಾಖಲಿಸಬೇಕು. ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಎಚ್.ಜಿ.ಗಂಗರಾಜು, ಕುಮಾರ, ಕೃಷ್ಣ, ಸೋಮಶೇಖರ್, ಪ್ರಮೋದ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…