ಮಂಡ್ಯ

ಮಂಡ್ಯ| ಶಾಸಕ ರವಿಕುಮಾರ್‌ ಗಣಿಗ ವಿರುದ್ಧ ಪ್ರಗತಿಪರ ಸಂಘಟನೆ ಮುಖಂಡರ ಆಕ್ರೋಶ

ಮಂಡ್ಯ: ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗಳ ಬಗ್ಗೆ ಶಾಸಕ ರವಿಕುಮಾರ್ ಗಣಿಗ ಹೇಳಿಕೆ ಖಂಡಿಸಿ ಪ್ರಗತಿಪರ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದ ಪ್ರಗತಿಪರ ಸಂಘಟನೆಯ ಮುಖಂಡರು, ಶಾಸಕ ರವಿ ಕುಮಾರ್‌ ಗಣಿಗ ಅವರು ಒತ್ತಡಗಳಿಂದ ವಿವೇಕವಿಲ್ಲದೆ, ಆಲೋಚನೆ ಇಲ್ಲದೆ ಮಾತನಾಡಿದ್ದಾರೆ. ಕಳೆದ ಜೂನ್.6ರಂದು ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಸರ್ಕಾರದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರೈತ ಸಂಘಟನೆಗಳ, ಗ್ರಾಮಸ್ಥರ, ಸಾರ್ವಜನಿಕರ ಸಭೆಯಲ್ಲಿ ಸರ್ವಾನುಮತದಿಂದ ಯೋಜನೆಗಳನ್ನು ರದ್ದುಪಡಿಸಲು ನಿರ್ಣಯ ಕೈಗೊಳ್ಳಲಾಗಿದೆ. ಇದನ್ನು ಶಾಸಕರು ಮನವರಿಕೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಶಾಸಕರು ಅಧಿಕಾರದಿಂದ ಮಾತನಾಡುತ್ತಿದ್ದಾರೆ, ಕಾವೇರಿ ಆರತಿ, ಅಮ್ಯೂಸ್ ಮೆಂಟ್ ಪಾರ್ಕ್ ಯೋಜನೆಗಳು ಭವಿಷ್ಯದಲ್ಲಿ ಕೆಆರ್‌ಎಸ್‌ ಅಣೆಕಟ್ಟು, ಅಚ್ಚುಕಟ್ಟು ಪ್ರದೇಶಗಳು, ರೈತರು ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ಎಷ್ಟು ಅಪಾಯಕಾರಿ ಎಂಬುದನ್ನು ಅರ್ಥೈಸಿಕೊಳ್ಳಬೇಕು.

ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರ ಸಭೆಯ ನಿರ್ಧಾರಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದು ಶಾಸಕರಿಗೆ ಶೋಭೆ ತರುವುದಿಲ್ಲ. ಅಣೆಕಟ್ಟು, ನದಿ ಪ್ರದೇಶಗಳು, ಪ್ರವಾಸೋದ್ಯಮದ ಕೇಂದ್ರಗಳಲ್ಲ, ನಿಷೇಧಿತ ಪ್ರದೇಶಗಳಾಗಿವೆ ಎಂದರು. ನಂತರ ಕೆಆರ್‌ಎಸ್‌ನಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಗೆ ಪ್ರಯಾಣ ಬೆಳೆಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರರಾದ ಸುನಂದ ಜಯರಾಂ, ಕೆ.ಬೋರಯ್ಯ, ನಾಗಣ್ಣಗೌಡ, ಹೆಚ್.ಡಿ.ಜಯರಾಂ, ಎಸ್.ನಾರಾಯಣ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

8 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

8 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

18 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

19 hours ago