ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಕನ್ನಡ ಸೇನೆಯಿಂದ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮೈಸೂರು ಬೆಂಗಳೂರು ಹೆದ್ದಾರಿ ತಡೆದು, ಕಾವೇರಿ ನೀರಿಗಾಗಿ ಸಂಸದರು ಶಾಸಕರು ಒಗಟ್ಟು ಪ್ರದರ್ಶಿಸಬೇಕು. ಯಾವುದೇ ಕಾರಣಕ್ಕೂ CWRC ಆದೇಶ ಪಾಲಿಸಬಾರದು. ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ಆಗ್ರಹಿಸಿದರು.
ಇನ್ನು ಮೈಸೂರು ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾರಣ ಕೆಲಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಸವಾರರು ಪರದಾಡಿದರು.