ಮಂಡ್ಯ

ಕಾವೇರಿ ಆರತಿ,ಅಮ್ಯೂಸ್‌ಮೆಂಟ್‌ಗೆ ವಿರೋಧ ; ಕೆಆರ್‌ಎಸ್‌ನಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಮಂಡ್ಯ: ರಾಜ್ಯ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಕಾವೇರಿ ಆರತಿ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘ, ದಲಿತ, ಮಹಿಳಾ, ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರೈತರು, ಕೆಆರ್‌ಎಸ್ ವ್ಯಾಪ್ತಿಯ ಗ್ರಾಮಸ್ಥರು, ಕನ್ನಡಪರ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೊರಲ ವಿರೋಧವನ್ನೂ ಲೆಕ್ಕಿಸದೆ ಸರ್ಕಾರ ಕಾವೇರಿ ಆರತಿ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್ ಮಾಡೇ ಮಾಡುತ್ತೇವೆಂದು ದರ್ಪ, ದೌರ್ಜನ್ಯದ ರೀತಿಯಲ್ಲಿ ಮಾತನಾಡುತ್ತಿರುವುದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಾಹಿತಿ ಹರಿಹರ ಪ್ರಿಯ ಮಾತನಾಡಿ, ಶಾಸಕ ಪಿ.ರವಿಕುಮಾರ್ ಅವರು ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಮಾಡೇ ಮಾಡುತ್ತೇವೆಂದು ಸವಾಲು ಹಾಕಿದ್ದಾರೆ. ರೈತರು ಎದ್ದರೆ ನಿಮಗೆ ಸರಿಯಾದ ಮಂಗಳಾರತಿ ಆಗುತ್ತೆ ಎಂದು ಖಡಕ್ ಎಚ್ಚರಿಕೆ ಕೊಟ್ಟರು.ಅಲ್ಲದೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಿಎಂ, ಡಿಸಿಎಂ ಕಾರಣ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಸಹೋದರ ಸೋತಿದ್ದರಿಂದ ಡಿ.ಕೆ.ಶಿವಕುಮಾರ್‌ಗೆ ಹುಚ್ಚು ಬಂದಿದೆ. 30 ವರ್ಷಗಳ ಕಾಲ ರಜೆಯನ್ನೇ ಹಾಕದೆ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ ಐಪಿಎಸ್ ಅಧಿಕಾರಿ ದಯಾನಂದ್ ಅವರನ್ನು ಅಮಾನತುಗೊಳಿಸಿದ್ದೀರಿ ಎಂದು ರಾಜಕಾರಣಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago