Protest by planting trees on a potholed road
ಕೆ.ಆರ್.ಪೇಟೆ : ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಹೊನ್ನೇನಹಳ್ಳಿ ಗ್ರಾಮಸ್ಥರು ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ನಂತರ ಮಾತನಾಡಿದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ವಿನುತಾ ಸುರೇಶ್, ಮಾಜಿ ಸ್ಪೀಕರ್ ದಿ.ಕೃಷ್ಣ ಅವರ ಕಾಲದಿಂದಲೂ ರಸ್ತೆ ಇಲ್ಲ. ಇಲ್ಲಿಯವರೆಗೂ ಕ್ಷೇತ್ರದಲ್ಲಿ ಗೆದ್ದ ಶಾಸಕರು-ಸಚಿವರು ಯಾರೂ ಕೂಡ ಇತ್ತ ತಲೆ ಕೆಡಿಸಿಕೊಂಡಿಲ್ಲ. ಗ್ರಾಮದಲ್ಲಿ ಕಳೆದ ಬಾರಿ ವಿಧಾನಸಭಾ ಕ್ಷೇತ್ರ ಚುನಾವಣೆಯನ್ನು ಬಹಿಷ್ಕಾರ ಮಾಡಲು ಮುಂದಾಗಿದ್ದರು.
ನಂತರ ಕ್ಷೇತ್ರದ ರಾಜಕೀಯ ಪಕ್ಷಗಳ ಮುಖಂಡರು ಚುನಾವಣೆಯನ್ನು ಬಹಿಷ್ಕಾರ ಮಾಡಬೇಡಿ, ಮುಂದೆ ಗ್ರಾಮದ ರಸ್ತೆ ಕಾಮಗಾರಿಯನ್ನು ಮಾಡಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಯಾರೂ ಕೂಡ ಇತ್ತ ತಿರುಗಿಯೂ ನೋಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥರಾದ ಶೇಖರ್, ಶಿವು, ಗ್ರಾಪಂ ಮಾಜಿ ಅಧ್ಯಕ್ಷ ಮಂಜು, ರವಿ, ರಂಗೇಗೌಡ, ಪ್ರೇಮ, ಕಾಳಯ್ಯ, ಚಲುವಯ್ಯ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…