ಮಂಡ್ಯ: ಇಲ್ಲಿನ ಕೊಪ್ಪದಿಂದ ಮಾರಗೌಡನಹಳ್ಳಿ ಕೆರಗೋಡು ಮಾರ್ಗವಾಗಿ ಮಂಡ್ಯಕ್ಜೆ ತೆರಳುವ ಬಸ್ಸನ್ನು ಕೋಡಿದೊಡ್ಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತಡೆದು ಪ್ರತಿಭಟನೆ ನಡೆಸಿದರು.
ಕೋಡಿದೊಡ್ಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಕೊಪ್ಪದಿಂದ ಬೆಳಿಗ್ಗೆ 8:45 ಮಂಡ್ಯಗೆ ಹೊರಡುವ ಬಸ್ಸು ಮುಡಲುದೊಡ್ಡಿ ಗ್ರಾಮದ ಮಾರ್ಗವಾಗಿ ತೆರಳುತ್ತಿದೆ. ಇದರಿಂದ ಕೋಡಿದೊಡ್ಡಿಯ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು ಇಂದು ಬಸ್ ತಡೆದು ಪ್ರತಿಭಟನೆ ನಡೆಸಿದರು.
ಬಳಿಕ ಈ ವಿಚಾರದ ಕುರಿತು ವಾಹನ ನಿಯಂತ್ರಕ ಮಂಡ್ಯ ಡಿಪೋ ಮ್ಯಾನೇಜರ್ ಗಮನಕ್ಕೆ ತಂದಿದ್ದು, ಮುಂದಿನ ಸೋಮವಾರದಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಪೋ ಮ್ಯಾನೇಜರ್ ಭರವಸೆ ನೀಡಿದ್ದಾರೆ. ಡಿಪೋ ಮ್ಯಾನೇಜರ್ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟಿದ್ದಾರೆ.
ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…
ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…
ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…
ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…
ಡಿ.ವಿ.ರಾಜಶೇಖರ ಪಾಕಿಸ್ತಾನದ ಜಾಫರ್ ಎಕ್ಸ್ಪ್ರೆಸ್ ರೈಲು ಅಪಹರಣ ಮಾಡಿದ್ದ ಬಲೂಚಿ ಪ್ರತ್ಯೇಕತಾವಾದಿಗಳನ್ನು (ಬಲೂಚಿಸ್ತಾನ್ ಲಿಬರೇಷನ್ ಆರ್ಮಿ-ಬಿಎಲ್ಎ) ಕೊಲ್ಲುವಲ್ಲಿ ಪಾಕಿಸ್ತಾನ ಸೇನೆ…
ಹೇಮಂತ್ಕುಮಾರ್ ಒಂದೂವರೆ ತಿಂಗಳಾದರೂ ಬಿಡುಗಡೆಯಾಗದ ನರೇಗಾ ಕೂಲಿ ಹಣ ಮಂಡ್ಯ: ಸರ್ಕಾರಿ ನೌಕರಿಯಲ್ಲಿರುವವರಿಗೆ ಎಲ್ಲ ಸೌಲಭ್ಯಗಳೊಂದಿಗೆ ತಿಂಗಳಾದ ಕೂಡಲೇ ಪಗಾರ…