ಮಂಡ್ಯ

ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ

ಮಂಡ್ಯ : ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ನಿರ್ಬಂಧ ವಿಧಿಸಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ  ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ನಡೆಸಿದ ಕಾರ್ಯಕರ್ತೆಯರು,
ಮೈಕ್ರೋ ಫೈನಾನ್ಸ್‌ ಗಳ ಸಾಲದ ಸುಳಿಗೆ ಸಿಲುಕಿ ರಾಜ್ಯದಲ್ಲಿ ಮಹಿಳೆಯರು ಮತ್ತು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೆಚ್ಚಿನ ಬಡ್ಡಿ ಸುಲಿಗೆ, ಅಶ್ಲೀಲ ಪದ ಬಳಕೆ, ಹಣ ವಸೂಲಾತಿಗಾಗಿ ರೌಡಿಗಳ ಬಲ ಪ್ರಯೋಗದಂತಹ ಕ್ರೌರ್ಯಗಳು ಹೆಚ್ಚಾಗಿವೆ.

ಫೈನಾನ್ಸ್ ಸಂಸ್ಥೆಗಳು ಮಾತ್ರವಲ್ಲದೆ ರಾಜ್ಯದ ಪ್ರತಿಷ್ಠಿತ ಖಾಸಗಿ ಹಣಕಾಸು ಕಂಪನಿಗಳು ಅನಿಯಂತ್ರಿತ ಠೇವಣಿಗಳ ಯೋಜನೆಯಡಿ ಅಧಿಕ ಬಡ್ಡಿಯ ಅಸೆ ತೋರಿಸಿ ಜನರಿಂದ ಹಣ ದೋಚಿ ವಂಚಿಸಿರುವ ಘಟನೆಗಳು ಕೂಡಾ ಬೆಳಕಿಗೆ ಬಂದಿವೆ. ಈ ಪ್ರಕರಣಗಳ ವಿರುದ್ಧವು ಕೂಡಾ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಮೋಸ ಹೋದ ಜನರಿಗೆ ಯಾವುದೆ ಪರಿಹಾರ ದೊರೆತಿಲ್ಲ. ಇದರ ಜೊತೆಗೆ ಮೀಟರ್ ಬಡ್ಡಿ ದಂದೆಗಳು ಜನಸಾಮಾನ್ಯರನ್ನು ರಕ್ತ ಹೀರುವ ಜಿಗಣೆಗಳಂತೆ ಬಾಧಿಸುತ್ತಿವೆ.

ಸಾಲದ ಸುಳಿಯಿಂದ ಪಾರು ಮಾಡಲು ಸುಗ್ರಿವಾಜ್ಞೆ ಹೊರಡಿಸಿದರೆ ಪ್ರಯೋಜನವಿಲ್ಲ. ಅಲ್ಲದೆ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶೈಕ್ಷಣಿಕವಾಗಿ, ಮತ್ತು ಔದ್ಯೋಗಿಕವಾಗಿ ಸಬಲರಾಗಿ ಮಾಡದೆ ನೂರಾರು ಕಾನೂನು ಜಾರಿಮಾಡಿದರು ಪ್ರಯೋಜನವಿಲ್ಲ. ಇದನ್ನು ಅರಿತು ರಾಜ್ಯ ಮತ್ತು ಕೇಂದ್ರ ಸರ್ಕಾರ ಸಮರ್ಪಕವಾಗಿ ಜವಾಬ್ದಾರಿ ನಿರ್ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪೂರ್ಣಿಮಾ, ಸಿದ್ದರಾಜು, ಕಮಲ, ಶಿಲ್ಪ ಬಿ ಎಸ್, ಲತಾ ಶಂಕರ್, ಪ್ರಿಯ ರಮೇಶ್, ಗಿರಿಜಾ, ಸುಮಾ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago