ಮಂಡ್ಯ

ಜು.10ರಂದು ಸಂಸತ್ ಎದುರು ಪ್ರತಿಭಟನೆ : ವಿಕಲಚೇತನರ ಹಕ್ಕುಗಳ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಂಬುರಾಜನ್ ಮಾಹಿತಿ

ಮಂಡ್ಯ : ಕೇಂದ್ರ ಸರ್ಕಾರ ಅಂಗವಿಕಲರಿಗೆ ಬಜೆಟ್‌ನಲ್ಲಿ ಮೀಸಲಿಡಬೇಕಿದ್ದ ಅನುದಾನವನ್ನು ಕಡಿತಗೊಳಿಸಿರುವುದರಿಂದ ಅಂಗವಿಕಲರು ಮತ್ತು ಅವರ ಕುಟುಂಬ ಸಂಕಷ್ಟಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಜು.10ರಂದು ನವದೆಹಲಿಯಲ್ಲಿ ಸಂಸತ್ ಭವನದ ಮುಂದೆ ಅಥವಾ ಜಂತರ್ ಮಂತರ್ ಬಳಿ ಸುಮಾರು ಹತ್ತು ಸಾವಿರ ಅಂಗವಿಕಲರು ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಕಲಚೇತನರ ಹಕ್ಕುಗಳ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಂಬುರಾಜನ್ ತಿಳಿಸಿದರು.

ನಗರದ ಹೊಸಹಳ್ಳಿ ರಸ್ತೆಯ ಸಿಪಿಐಎಂ ಕಚೇರಿಯಲ್ಲಿ ಆಯೋಜಿಸಿದ್ದ ಅಂಗವಿಕಲರು ಮತ್ತು ಪಾಲಕರ ಒಕ್ಕೂಟದ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಹಿಂದೆ ಅಂಗವಿಕಲರಿಗಿದ್ದ ಶೇ.0.008 ಅನುದಾನವನ್ನು ಶೇ.0.004ಕ್ಕೆ ಇಳಿಸಿದೆ. ಇದು ಅಂಗವಿಕಲರ ಮತ್ತವರ ಕುಟುಂಬಗಳ ಮೇಲೆ ಪರಿಣಾಮ ಬೀರಿದೆ. ಮನರೇಗಾದಲ್ಲಿ ಅಂಗವಿಕಲರಿಗಾಗಿ ವಿಶೇಷ ನಿಯಮಗಳನ್ನು ರೂಪಿಸಲಾಗಿದೆ. ಶೇ.33 ಹಣ ಮೀಸಲು ಕಡಿಮೆ ಮಾಡಿದೆ. ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉದ್ದಿಮೆಗಳು, ಬ್ಯಾಂಕ್, ವಿಮೆ, ಸಾರ್ವಜನಿಕ ಉದ್ದಿಮೆ ಇತ್ಯಾದಿಗಳು ಖಾಸಗಿಕರಣವಾಗುತ್ತಿದೆ. ಇದರಿಂದ ಅಂಗವಿಕಲರಿಗೆ ಕೆಲಸ ಸಿಗುತ್ತಿಲ್ಲ. ಹೀಗೆ ಅನೇಕ ರೀತಿಯ ಸಮಸ್ಯೆಗಳಲ್ಲಿ ಅಂಗವಿಕಲರು ನೊಂದಿದ್ದಾರೆ. ಹಾಗಾಗಿ ಅಂಗವಿಕಲರು ಮತ್ತು ಪಾಲಕರ ಒಕ್ಕೂಟ ಈ ಬಗ್ಗೆ ಆದ್ಯ ಗಮನ ನೀಡಿ ಹೋರಾಟ ಕೈಗೊಳ್ಳುತ್ತದೆ ಎಂದರು.
ಒಕ್ಕೂಟದ ಸಲಹೆಗಾರ ಜಿ.ಎನ್.ಯಶಸ್ವಿ, ವಲಯ ಕಾರ್ಯದರ್ಶಿ ಅರ್ಬುದ ರಾಜನ್, ಸಿಐಟಿಯು ಕಾರ್ಯದರ್ಶಿ ಸಿ.ಕುಮಾರಿ ಇತರರಿದ್ದರು.

lokesh

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

7 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

13 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

14 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

15 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago