ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.
ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಯ ವೇಳೆ ಕಲ್ಲು ತೂರಾಟ ನಡೆದಿದೆ. ತಡರಾತ್ರಿ ನಡೆದ ಘಟನೆಯಿಂದ ಮದ್ದೂರು ಪಟ್ಟಣ ಬೂದಿಮುಚ್ಚಿದ ಕೆಂಡದಂತಾಗಿದ್ದು, 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಇನ್ನು ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.
ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದು, ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಘಟನೆಯಿಂದ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.





