ಮಂಡ್ಯ

ಮದ್ದೂರಿನಲ್ಲಿ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ: ಪೊಲೀಸರಿಂದ ಲಘು ಲಾಠಿ ಪ್ರಹಾರ

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸುತ್ತಿವೆ.

ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಯ ವೇಳೆ ಕಲ್ಲು ತೂರಾಟ ನಡೆದಿದೆ. ತಡರಾತ್ರಿ ನಡೆದ ಘಟನೆಯಿಂದ ಮದ್ದೂರು ಪಟ್ಟಣ ಬೂದಿಮುಚ್ಚಿದ ಕೆಂಡದಂತಾಗಿದ್ದು, 144 ಸೆಕ್ಷನ್‌ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನು ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.

ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದು, ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಘಟನೆಯಿಂದ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

9 mins ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

23 mins ago

ಗಾಂಧಿಯನ್ನು ಬದುಕಿಸಿ ಬೆಳಗಿಸಿದ ಆಡು ಪಾಡು

ಡಾ.ರಘುಪತಿ, ಚಿನಾಕಳ್ಳಿ ಅದು ೧೯೧೮ರ ಆಸುಪಾಸು. ಒಂದು ಕಡೆ ಖೇಡಾ ಸತ್ಯಾಗ್ರಹದ ಭರಾಟೆಯಲ್ಲಿ ದೇಶ ಮುಳುಗೇಳುತ್ತಿರುತ್ತದೆ.ಇನ್ನೊಂದೆಡೆ ರೌಲತ್ ಕಾಯ್ದೆಯ ಅಮಾನುಷ…

30 mins ago

ಗಾಂಧಿ ಅಭಿಯಾನ ಅರಿವಿನ ಯಾನ

೨೨ ವಾರಗಳ ಗಾಂಧಿ ಅರಿವಿನ ಯಾನ  ಮಹಾತ್ಮ ಗಾಂಧೀಜಿಯವರ ಜೊತೆಗಿನ ನಿಮ್ಮ ‘ಆಂದೋಲನ’ ಪತ್ರಿಕೆಯ ಅರಿವಿನ ಯಾನದ ಈ ವರ್ಷದ ಕೊನೆಯ…

37 mins ago

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

21 hours ago