ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಬಳಿ ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ಹಾಗೂ ಪ್ರಗತಿಪರ ರೈತ ಮುಖಂಡರ ಸಭೆಯು ಜೂ.11ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಕೆಆರ್‌ಎಸ್ ಅಣೆಕಟ್ಟೆ ಬಳಿ ಪ್ರತಿಭಟನಾ ಸಭೆಯನ್ನು ಕರೆಯಲಾಗಿದೆ ಎಂದು ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಮ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜು. 6ರ ಶುಕ್ರವಾರ ಮಂಡ್ಯದ ಜಿ.ಪಂ. ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ರೈತ ಸಂಘಟನೆಗಳು ಹಾಗೂ ಸಾರ್ವಜನಿಕರ ಸಭೆಯಲ್ಲಿ ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯನ್ನು ಕೈ ಬಿಡಬೇಕೆಂದು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.
ಕೆಆರ್‌ಎಸ್ ಅಣೆಕಟ್ಟೆ ಬಳಿ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.