ಶ್ರೀರಂಗಪಟ್ಟಣ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚಿಸಿರುವುದನ್ನು ವಿರೋಧಿಸಿ ಕೃಷ್ಣರಾಜ ಸಾಗರದ ಬಳಿ ರೈತರು ಕೈಗೆ ಕಪ್ಪುಪಟ್ಟಿ ಧರಿಸಿ, ಬಾಯಿ ಬಡಿದುಕೊಂಡು ಪ್ರತಿಭಟಿಸಿದರು.
ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ, ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ ನೇತೃತ್ವದಲ್ಲಿ ಜಲಾಶಯದ ಎದುರು ನೂರಾರು ರೈತರು ಬಾಯಿ ಬಡಿದುಕೊಳ್ಳುವ ಮೂಲಕ ಪ್ರತಿಭಟಿಸಿ, ಕರ್ನಾಟಕ ರಾಜ್ಯದ ರೈತರಿಗೆ ಆಗುತ್ತಿರುವ ನಿರಂತರ ಅನ್ಯಾಯ ಸಹಿಸಲು ಅಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5,000 ಕ್ಯುಸೆಕ್ ನೀರು ಬಿಡುಗಡೆ ಮಾಡಬೇಕೆಂಬ ಆದೇಶ ಅವೈಜ್ಞಾನಿಕ ನಿರ್ಣಯವಾಗಿದೆ, ರಾಜ್ಯದಲ್ಲಿ ಬರಗಾಲದ ಸನ್ನಿವೇಶ ಸೃಷ್ಟಿಯಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದ್ದರೂ ತಮಿಳುನಾಡಿಗೆ ನೀರು ಬಿಡಬೇಕೆಂದು ಹೇಳಿರುವುದು ಸರಿಯಲ್ಲ ಎಂದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಇಲ್ಲಿನ ವಾಸ್ತವತೆಯನ್ನು ನ್ಯಾಯಾಲಯ ಮತ್ತು ಸಮಿತಿಗೆ ಮನದಟ್ಟು ಮಾಡಿಕೊಡದ ರಾಜ್ಯ ಸರ್ಕಾರ ರೈತರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…