ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೌಶಲ್ಯ ಅಭಿವೃದ್ಧಿ ತರಬೇತಿಗಳು ಇಂದಿನ ಯುವಜನತೆಗೆ ಅಗತ್ಯವಾಗಿವೆ. ಯುವನಿಧಿ, ಯುವನಿಧಿ ಪ್ಲಸ್ ಯೋಜನೆಯಡಿ ತಾಂತ್ರಿಕ ಹಾಗೂ ಕೈಗಾರಿಕಾ ಕೌಶಲ್ಯವನ್ನು ಯುವಕರಿಗೆ ಕಲಿಸಿ ಅವರಿಗೆ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೇರೆ ಬೇರೆ ಸಂಸ್ಥೆಗಳಿಂದ ಸ್ಫೋಕನ್ ಇಂಗ್ಲಿಷ್ ತರಬೇತಿಯನ್ನು ನೀಡುವಂತೆ ಮತ್ತು ವಿಶೇಷ ಚೇತನರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗಾನಂದ, ಡಿಎಚ್‌ಓ ಡಾ.ಮೋಹನ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




