ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು.
ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, 53 ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು ಸಲ್ಲಿಸಬಹುದಾಗಿದೆ ಎಂದರು. ಸ್ವತಃ ಅರ್ಜಿ ಸ್ವೀಕರಿಸಿ ಸಮಸ್ಯೆಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಭಿವೃದ್ಧಿ ಕೆಲಸವೇ ನಮ್ಮ ಗುರಿ, ಅಪಪ್ರಚಾರಕ್ಕೆ ಕಿವಿಕೊಡದಿರಿ. ನಿಮ್ಮ ಕೆಲಸಗಳು ಸುಗಮವಾಗಿ ಆಗಬೇಕು. ನಿಮ್ಮ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತರುತ್ತೇವೆ. ಉಚಿತ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದೆ. ಸದುಪಯೋಗ ಪಡಿಸಿಕೊಳ್ಳಿ. ಇತಿಹಾಸದಲ್ಲಿ 35 ಕೋಟಿ ಹಣ ಆಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಕೊಡಲಾಗಿದೆ ಎಂದು ಹೇಳಿದರು.





