ganshagansha
ಶ್ರೀರಂಗಪಟ್ಟಣ : ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಕಾಲ್ನಡಿಗೆ ಜಾಥವನ್ನ ಮಾಡುವ ಮುಖಾಂತರ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಮನೆ ಮನೆಗೆ ತೆರಳಿ ಪರಿಸರಸ್ನೇಹಿ ಗೌರಿ ಗಣಪತಿ ಮೂರ್ತಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಬಳಿಕ ಮಾತನಾಡಿದ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಮಂಜುರಾಮ, ಗಣೇಶ ಹಬ್ಬದಲ್ಲಿ ಹಾನಿಕಾರಕ ಉತ್ಪನ್ನಗಳಿಂದ ತಯಾರಿಸಿದ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಬಳಸಬೇಕೆಂದು ತಿಳಿಸಿದರು.
ಹಾಗೆಯೇ ರೋಟರಿ ಸಂಸ್ಥೆಯ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ.ರಾಘವೇಂದ್ರ ಅವರು ಮಾತನಾಡಿ, ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸುವುದು ಉತ್ತಮ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ವೇಳೆ ರೋಟರಿ ಕ್ಲಬ್ ಕಾರ್ಯದರ್ಶಿ ಎನ್.ನಾಗೇಂದ್ರ, ರೇವಣ್ಣ, ದರ್ಶನ್, ಪುನೀತ್, ಏಕಾಂತ್, ಅಚೀವರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…