Mysore
27
clear sky

Social Media

ಮಂಗಳವಾರ, 14 ಏಪ್ರಿಲ 2026
Light
Dark

ಮಂಡ್ಯದಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ: ಮೂವರ ಬಂಧನ

ಮದ್ದೂರು: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿ ಮೂವರು ಆರೊಪಿಗಳನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಅಂಬೇಡ್ಕರ್‌ ಭವನದ ಬಳಿ ನಡೆದಿದೆ.

ತಬ್ರೇಜ್‌, ಮನ್ಸೂರ್‌ ಹಾಗೂ ಲೋಕೇಶ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಸುಮಾರು 30ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ.

ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮೈಸೂರು ಕಡೆಯಿಂದ ಬೆಂಗಳೂರಿಗೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಕೆ.ಆರ್.ಪೇಟೆಯ ಕಿಕ್ಕೇರಿ ಮೂಲದ ಜಾನುವಾರುಗಳು ಇವಾಗಿದ್ದು, ಕಿಕ್ಕೇರಿಯಿಂದ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಗೋವುಗಳಿದ್ದ ಕ್ಯಾಂಟರ್‌ನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪುನೀತ್‌ ಕೆರೆಹಳ್ಳಿ ಭಾಗಿಯಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ಜೀವ ಉಳಿಸಿದ್ದಾರೆ. ಈ ಸಂಬಂಧ ಮದ್ದೂರು ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!