ಮದ್ದೂರು: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿ ಮೂವರು ಆರೊಪಿಗಳನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಅಂಬೇಡ್ಕರ್ ಭವನದ ಬಳಿ ನಡೆದಿದೆ.
ತಬ್ರೇಜ್, ಮನ್ಸೂರ್ ಹಾಗೂ ಲೋಕೇಶ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಸುಮಾರು 30ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ.
ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮೈಸೂರು ಕಡೆಯಿಂದ ಬೆಂಗಳೂರಿಗೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಕೆ.ಆರ್.ಪೇಟೆಯ ಕಿಕ್ಕೇರಿ ಮೂಲದ ಜಾನುವಾರುಗಳು ಇವಾಗಿದ್ದು, ಕಿಕ್ಕೇರಿಯಿಂದ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಗೋವುಗಳಿದ್ದ ಕ್ಯಾಂಟರ್‌ನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಪುನೀತ್ ಕೆರೆಹಳ್ಳಿ ಭಾಗಿಯಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ಜೀವ ಉಳಿಸಿದ್ದಾರೆ. ಈ ಸಂಬಂಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…