Mysore
17
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಪಿಡಬ್ಲ್ಯೂಡಿ ಕಚೇರಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಪಿಡಬ್ಲ್ಯೂಡಿ ಕಚೇರಿಯಲ್ಲಿ ಇರುವ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯ ನಗರದ ಪಿಡಬ್ಲ್ಯೂಡಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪಿಡಬ್ಲ್ಯೂಡಿ ಕಚೇರಿಯಲ್ಲಿ ಅನೇಕ ಸಮಸ್ಯೆಗಳಿಗೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಇಲಾಖೆಯಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು. ಅನೇಕ ಇಲಾಖೆಗಳಲ್ಲಿ ಹಲವಾರು ಸಮಸ್ಯೆಗಳಿಗೆ. ಅವುಗಳನ್ನೆಲ್ಲಾ ನಾವು ಆದಷ್ಟು ಬೇಗ ಸರಿಪಡಿಸಿ ಜನರಿಗೆ ಅನುಕೂ ಮಾಡಿಕೊಡಲು ಶ್ರಮ ವಹಿಸುತ್ತೇವೆ ಎಂದರು.

ಸಭೆಯಲ್ಲಿ ಪಿಡಬ್ಲ್ಯೂಡಿ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಹರ್ಷ, ಸಿಎನ್‌ಎನ್‌ಎಲ್‌ವಿಸಿ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ನಂಜುಂಡೇಗೌಡ, ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಹನುಮಂತು ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags:
error: Content is protected !!