ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕೀಕೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು. ಶಾಲಾ ಹಂತದಲ್ಲಿ ಹೆಣ್ಣು-ಮಕ್ಕಳು ಗೈರು ಹಾಜರು ವಿವರಗಳನ್ನು ಶಿಕ್ಷಕರು ಪರಿಶೀಲಿಸಬೇಕು. ಈ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಶ್ರೀ ಶಕ್ತಿ ಗುಂಪುಗಳು ಸದಸ್ಯರುಗಳಿಗೆ ಅರಿವು ಮೂಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ಇರುವುದರಿಂದ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡಬೇಕು ಎಂದು ಹೇಳಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…