ಭಾರತೀನಗರ : ಇಲ್ಲಿಗೆ ಸಮೀಪದ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮವೊಂದರ ಸಿದ್ದರಾಮು (೬೫) ಎಂಬಾತನೇ ಅತ್ಯಾಚಾರ ನಡೆಸಿದನೆಂದು ಹೇಳಲಾಗಿದೆ.
ದೊಡ್ಡಕುಳ್ಳಯ್ಯ ಎಂಬವರ ಮಗ ರಾಜು ಎಂಬಾತನ ಪತ್ನಿ ಗೌರಮ್ಮ ಎಂಬವರು ದೂರು ನೀಡಿದ್ದು, ನಾನು ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ೪ನೇ ತರಗತಿ ಓದುತ್ತಿರುವ ನನ್ನ ಮಗಳಿಗೆ ಒಬ್ಬಟ್ಟು ಕೊಡುವುದಾಗಿ ಪುಸಲಾಯಿಸಿ, ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ.
ನಾನು ಕೆಲಸ ಮುಗಿಸಿ ಮನೆಗೆ ಬಂದಾಗ ಮಗಳು ಅಳುತ್ತಿದ್ದು, ಈ ಬಗ್ಗೆ ವಿಚಾರಿಸಿದಾಗ ನಡೆದ ಸಂಗತಿಯನ್ನು ತಿಳಿಸಿದ್ದಾಳೆ. ಹಾಗಾಗಿ ಸಿದ್ದರಾಮು ಮೇಲೆ ಕ್ರಮ ಕೈಗೊಳ್ಳಬೇಕೆಂದು ಗೌರಮ್ಮ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…
ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…