ಮಂಡ್ಯ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಾಮುಕನಿಗೆ 20 ವರ್ಷ ಕಠಿಣ ಜೈಲು

ಮಂಡ್ಯ: ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಜೈಲು ಶಿಕ್ಷೆ ವಿಧಿಸಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಳಿಗುಂದ ಗ್ರಾಮದ ಯಶ್ವಂತ್‌ (33) ಶಿಕ್ಷೆಗೊಳಗಾದ ಅಪರಾಧಿ. ಈತ 2019 ರಲ್ಲಿ 17 ವರ್ಷದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ. ನಂತರ ನೊಂದ ಬಾಲಕಿ ಗರ್ಭವತಿಯಾಗಿದ್ದಳು.

ಈತನ ವಿರುದ್ಧ ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ದಿಲೀಪ್‌ ಕುಮಾರ್‌ ಅವರಿದ್ದ ಪೀಠ ಯಶ್ವಂತ್‌ನನ್ನು ಅಪರಾಧಿಯೆಂದು ತೀರ್ಮಾನಿಸಿತು.

ಈ ಹಿನ್ನಲೆ ಯಶ್ವಂತ್‌ಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ 2,500 ರೂ. ದಂಡ ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷಗಳ ಕಠಿಣ ಸಜೆ ಮತ್ತು 50 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿತು.ಅಲ್ಲದೇ ನೊಂದ ಬಾಲಕಿಗೆ 50,000 ರೂ. ಪರಿಹಾರ ನೀಡುವಂತೆ ಆದೇಶಿಸಿತು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

6 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

6 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

6 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

6 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

8 hours ago