Mysore
26
clear sky

Social Media

ಗುರುವಾರ, 22 ಜನವರಿ 2026
Light
Dark

ಅಕ್ರಮ ಮದ್ಯ, ಗಾಂಜಾ, ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಯಾವುದೇ ಕಳ್ಳ ಭಟ್ಟಿ ದಂಧೆ ನಡೆಯುತ್ತಿಲ್ಲ ಎಂದು ಹೇಳಿದರು.

ಸೇಂದಿ ಮಾರಾಟ ಮಾಡದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಹಾಗೂ ಅತಂಹ ಜಾಗಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸೇಂದಿ ಮಾರಾಟ ಎರಡನ್ನು ನಿಲ್ಲಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 671 ಅಕ್ರಮ ಮದ್ಯ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದರು.

ಸ್ಲಂ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಆಗದಂತೆ ಹಾಗೂ ಗಾಂಜಾ ಮಾರಾಟ ಮಾಡದಂತೆ ಮಾಡುವ ಬಗ್ಗೆ ಅಧಿಕಾರಿಗಳು ಹೆಚ್ಚು ಗಮನಹರಿಸಬೇಕು ಹಾಗೂ ಆ ಸ್ಥಳಗಳಿಗೆ ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು.

ಇದನ್ನೂ ಓದಿ:-ಮಾನವ-ವನ್ಯಪ್ರಾಣಿ ಸಂಘರ್ಷ : ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ; ಸಿಎಂ ಭರವಸೆ

ಕಳೆದ ವರ್ಷ 33 ಗಾಂಜಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಸದರಿ ವರ್ಷ ಆರು ಗಾಂಜಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಅರಣ್ಯ ಪ್ರದೇಶ ಹಾಗೂ ಬೆಳೆಗಳ ನಡುವೆ ಗಾಂಜಾ ಬೆಳೆದಿರುವ ಸಾಧ್ಯತೆ ಇರುತ್ತದೆ ಅಧಿಕಾರಿಗಳು ಪರಿಶೀಲನೆ ನಡೆಸಿ ತಪ್ಪಿತಸ್ಥ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ರೈತರಿಗೆ ಗಾಂಜಾ ಬೆಳೆಯುವುದು ತಪ್ಪು ಹಾಗೂ ಅದರಿಂದ ಎದುರಿಸಬೇಕಾದ ಪರಿಣಾಮಗಳನ್ನು ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಡಿಪ್ಲೋಮಾ ಪದವಿ ಕಾಲೇಜುಗಳು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಗಾಂಜಾ ಕುರಿತಾಗಿ ಹಾಗೂ ಅದರ ದುಷ್ಪರಿಣಾಮಗಳ ಕುರಿತಾಗಿ ಅರಿವು ಮೂಡಿಸಿ. ಗ್ರಾಮ ಸಭೆಗಳಲ್ಲಿ ಜನರಿಗೆ ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟದ ಕುರಿತಾಗಿ ಅರಿವು ಮೂಡಿಸಿ. ಅಬಕಾರಿ ಇಲಾಖೆ ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಜಿಲ್ಲೆಯಲ್ಲಿ ಅಕ್ರಮ ಮಧ್ಯೆ ಗಾಂಜಾ ಹಾಗೂ ಡ್ರಗ್ಸ್ ನಂತಹ ಮಾದಕ ಪದಾರ್ಥಗಳು ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಅಬಕಾರಿ ಜಿಲ್ಲಾಧಿಕಾರಿ ನಾಗಶಯನ, ಡಯಟ್ ಉಪನ್ಯಾಸಕ ಚಂದ್ರಶೇಖರ್ ಸೇರಿದಂತೆ ಅಬಕಾರಿ ಇಲಾಖೆಯ ಎಲ್ಲಾ ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!