ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಸಮ್ಮಾನ್ ಯೋಜನೆಯ 19 ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿಕುಮಾರಸ್ವಾಮಿ ಹೇಳಿದ್ದಾರೆ.
ನಗರದ ವಿಸಿ ಫಾರಂನಲ್ಲಿ ಮಾತನಾಡಿದ ಅವರು, ರೈತರ ಕೃಷಿ ಚಟುವಟಿಕೆಗಾಗಿ ವರ್ಷದಲ್ಲಿ 3 ಕಂತುಗಳಲ್ಲಿ ರೂ 2000 ನೀಡಲಾಗುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ 2,46,947 ರೈತರು ಕಿಶನ್ ಸಮ್ಮಾನ್ ಯೋಜನೆಯಡಿ ನೆರವು ಪಡೆಯುತ್ತಿದ್ದು, 18 ಕಂತುಗಳಲ್ಲಿ 803 ಕೋಟಿ ನೆರವು ನೀಡಲಾಗಿದೆ ಎಂದರು.
ರೈತರು ಮುಂಗಾರು ಅಥವಾ ಹಿಂಗಾರು ಪ್ರಾರಂಭವಾಗುತ್ತಿದ್ದಂತೆ ಯಾವುದೇ ಲಾಭ ನಷ್ಠವನ್ನುಲೆಕ್ಕಚಾರ ಮಾಡದೆ ಬಿತ್ತನೆ ಪ್ರಾರಂಭಿಸಿ ದೇಶಕ್ಕೆ ಆಹಾರ ನೀಡುವ ನಿಸ್ವಾರ್ಥ ಮನಸ್ಸಿನವರು. ಇವರಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನ ಗೊಳಿಸುತ್ತಿದೆ ಎಂದರು.
ದೇಶದಲ್ಲಿ ಶೇ 50 ಕ್ಕಿಂತ ಹೆಚ್ಚು ಜನರು ರೈತರಿದ್ದಾರೆ. ರೈತರು ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಕೃಷಿಯ ಮೇಲೆ ಅವಲಂಬಿತರಾಗಿರುವ ರೈತರಿಗೆ 22 ಬೆಳೆಗಳಿಗೆ ಮಾತ್ರ ಬೆಂಬಲ ಬೆಲೆ ನೀಡಿರುವ ಬಗ್ಗೆ ಅಸಮಾಧನವಿದೆ. ಬೆಂಬಲ ಬೆಲೆ ಯೋಜನೆಯಡಿ ಬೆಳೆಗಳ ಸಂಖ್ಯೆ ಹೆಚ್ಚಾಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್ ಟಿ.ಮಂಜು, ವಿಧಾನ ಪರಿಷತ್ ಶಾಸಕ ವಿವೇಕನಂದ, ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.





