ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಹೇಳಿದರು.
ಇಂದು ಪೊಲೀಸ್ ಇಲಾಖೆಯ ವತಿಯಿಂದ ನಗರದ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರು ದಿನವಿಡಿ ಬಿಸಿಲು, ಮಳೆ, ಗಾಳಿ, ಹಬ್ಬ ಹರಿದಿನ ಮರೆತು ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡುತ್ತಿರುವುದರಿಂದ ನಾವು ಇಂದು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರು| ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ.
ಪೊಲೀಸರು ಇಂತಹ ಒಂದು ತ್ಯಾಗಮಯಿ ಜೀವನವನ್ನು ನಡೆಸುತ್ತಿದ್ದಾರೆ. ಇದಕ್ಕೆ ಅವರ ಕುಟುಂಬವೂ ಸಹ ಬೆನ್ನೆಲುಬಾಗಿ ನಿಂತಿದೆ. ನಮ್ಮ ನೆಮ್ಮದಿಗಾಗಿ ಹುತಾತ್ಮರಾದ ಪೊಲೀಸರನ್ನು ಕೇವಲ ಒಂದು ದಿನಕ್ಕೆ ಸೀಮಿತ ಮಾಡಿದೆ ದಿನವೂ ಸ್ಮರಿಸಬೇಕು ಎಂದು ಅಭಿಪ್ರಾಯಪಟ್ಟರು.
ಕಳೆದ ಹದಿನೆಂಟು ವರ್ಷಗಳಿಂದ ನಾನು ಕರ್ತವ್ಯದಲ್ಲಿ ಪೊಲೀಸರೊಂದಿಗೆ ಭಾಗಿಯಾಗಿದ್ದೇನೆ. ನಮ್ಮ ಕುಟುಂಬಕ್ಕಿಂತ ಹೆಚ್ಚು ಕಾಲ ಪೊಲೀಸರೊಂದಿಗೆ ಕೋರ್ಟ್‌ನಲ್ಲಿ ಕಾಲ ಕಳೆದಿದ್ದೇನೆ. ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ಶ್ರಮವಹಿಸಿ ಕರ್ತವ್ಯ ನಿಷ್ಠೆಯನ್ನು ಪೊಲೀಸರು ಮೆರೆಯುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…