ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರಿಗೆಲ್ಲರಿಗೂ ಸಚಿವ ಸ್ಥಾನ ಸಿಕ್ಕಿ ರಾಜ್ಯಕ್ಕೆ ಸೇವೆ ಸಲ್ಲಿಸಲಿ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಸೇರಿದಂತೆ 38 ಶಾಸಕರು ಪತ್ರ ಬರೆದಿದ್ದೇವೆ. ಐದು ಮಂದಿ ಹೊಸಬರಿಗೆ ಮಂತ್ರಿಗಿರಿ ನೀಡುವಂತೆ ಕೋರಿದ್ದೇವೆ. ಹೊಸದಾಗಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ತಮ್ಮ ಆಗ್ರಹದಲ್ಲಿ ಯಾವುದೇ ಬದಲಾವಣೆ ಇಲ್ಲ. ವೈಯಕ್ತಿಕವಾಗಿ ತನಗೆ ಸಚಿವ ಸ್ಥಾನ ಬೇಡ ಎಂದು ತಿಳಿಸಿದರು.
ಹಾಲಿ ಇರುವ ಕೆಲವು ಸಚಿವರು ಸಮರ್ಥವಾಗಿ ಕಾರ್ಯನಿರ್ವಹಿಸದಿರುವುದು ಮತ್ತು ಜನರಿಗೆ ಲಭ್ಯವಿಲ್ಲದಿರುವುದು ಕೆಲಸಗಳಿಗೆ ತೀವ್ರ ಅಡ್ಡಿಯಾಗುತ್ತಿದೆ. ಆದ್ದರಿಂದ ಇಂತಹ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.




