ಮಂಡ್ಯ

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರಿಗೆಲ್ಲರಿಗೂ ಸಚಿವ ಸ್ಥಾನ ಸಿಕ್ಕಿ ರಾಜ್ಯಕ್ಕೆ ಸೇವೆ ಸಲ್ಲಿಸಲಿ ಎಂದು ಶಾಸಕ ರವಿಕುಮಾರ್‌ ಗಣಿಗ ಹೇಳಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಸೇರಿದಂತೆ 38 ಶಾಸಕರು ಪತ್ರ ಬರೆದಿದ್ದೇವೆ. ಐದು ಮಂದಿ ಹೊಸಬರಿಗೆ ಮಂತ್ರಿಗಿರಿ ನೀಡುವಂತೆ ಕೋರಿದ್ದೇವೆ. ಹೊಸದಾಗಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ತಮ್ಮ ಆಗ್ರಹದಲ್ಲಿ ಯಾವುದೇ ಬದಲಾವಣೆ ಇಲ್ಲ. ವೈಯಕ್ತಿಕವಾಗಿ ತನಗೆ ಸಚಿವ ಸ್ಥಾನ ಬೇಡ ಎಂದು ತಿಳಿಸಿದರು.

ಹಾಲಿ ಇರುವ ಕೆಲವು ಸಚಿವರು ಸಮರ್ಥವಾಗಿ ಕಾರ್ಯನಿರ್ವಹಿಸದಿರುವುದು ಮತ್ತು ಜನರಿಗೆ ಲಭ್ಯವಿಲ್ಲದಿರುವುದು ಕೆಲಸಗಳಿಗೆ ತೀವ್ರ ಅಡ್ಡಿಯಾಗುತ್ತಿದೆ. ಆದ್ದರಿಂದ ಇಂತಹ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago