ಮಂಡ್ಯ

ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ: ಚಿಕ್ಕಲಿಂಗಯ್ಯ

ಮಂಡ್ಯ: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇತರೆ ಯೋಜನೆಗಳಿಗೆ ಹೋಲಿಸಿದರೆ ಗೃಹಲಕ್ಷ್ಮಿಯೋಜನೆಯಲ್ಲಿ ಹೆಚ್ಚಾಗಿ ಸಮಸ್ಯೆಗಳು ಕಂಡು ಬರುತ್ತಿದ್ದು, ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಿಕ್ಕಲಿಂಗಯ್ಯ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ 12,000 ಫಲಾನುಭವಿಗಳಿಗೆ ಕಳೆದ ಬಾರಿ ಗೃಹಲಕ್ಷ್ಮಿ ಹಣ ತಲುಪಿಲ್ಲ ಎಂದು ಮಾಹಿತಿ ಬಂದಿದ್ದು, ಈ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದರು.

ಇದನ್ನು ಓದಿ : ರಾಜಕೀಯಕ್ಕಾಗಿ ಗ್ಯಾರಂಟಿ ಯೋಜನೆ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ 

ಅನ್ನಭಾಗ್ಯ ಯೋಜನೆಯಡಿಯಲ್ಲಿ 2025ರ ಫೆಬ್ರವರಿ ಮಾಹೆಯಿಂದ ನಗದು ಬದಲು ಅಕ್ಕಿ ನೀಡಲಾಗುತ್ತಿದೆ. ಪ್ರತಿ ಮಾಹೆಯಲ್ಲಿ ಸಾರ್ವಜನಿಕರಿಗೆ ವಿತರಿಸುವ ಅಕ್ಕಿ ಮತ್ತು ರಾಗಿಯ ಅಂಕಿ – ಅಂಶ ವರದಿಯನ್ನು ಮುಂದಿನ ಸಭೆಗಳಲ್ಲಿ ಸಲ್ಲಿಸಬೇಕು ಎಂದು ಹೇಳಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 2023 ರ ಜೂನ್ ಮಾಹೆಯಿಂದ 2025 ರ ಆಗಸ್ಟ್ ಮಾಹೆಯವರೆಗೆ ಒಟ್ಟು 1599.17 ಲಕ್ಷ ಮಹಿಳೆಯರು ಉಚಿತ ಟಿಕೆಟ್ ಪಡೆದು ಸಂಚರಿಸಿದ್ದಾರೆ. ಜಿಲ್ಲೆಯಲ್ಲಿ ಕೆಲವೆಡೆ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌ಗಳು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರಿಂದ ದೂರು ಬರುತ್ತಿದೆ. ಡಿಪೋ ಮ್ಯಾನೇಜರ್ ಗಳಿಗೆ ಸಾರ್ವಜನಿಕರೊಂದಿಗೆ ಸರಿಯಾಗಿ ಸ್ಪಂದಿಸಲು ತಿಳಿಸಿ ಎಂದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

10 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

13 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

14 hours ago