ಮಂಡ್ಯ

ಗಣೇಶ ಉತ್ಸವದಲ್ಲಿ ಡಿಜೆ ಬಳಕೆಗೆ ಕಡಿವಾಣ ಹಾಕಿ : ಜಿಲ್ಲಾಡಳಿತಕ್ಕೆ ಸಾಮಾಜಿಕ ಕಾರ್ಯಕರ್ತರ ಮನವಿ

ಮಂಡ್ಯ : ಗಣೇಶ ಉತ್ಸವದ ಬಳಿಕ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಎಲ್.ತುಳಸಿಧರ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಗೌರಿ-ಗಣೇಶ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆ ಮಾಡುತ್ತಿರುವುದು ಸರಿಯಲ್ಲ. ಶಬ್ಧ ಮಾಲಿನ್ಯದ ಜೊತೆಗೆ ವೃದ್ಧರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಗಲಾಟೆಗೂ ಅವಕಾಶ ಮಾಡಿಕೊಡುತ್ತಿದೆ ಎಂದಿದ್ದಾರೆ.

ಡಿಜೆ ಶಬ್ದ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಹೃದಯದ ಆರೋಗ್ಯ ಸಮಸ್ಯೆ ಇರುವವರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಅದೇ ರೀತಿ ಶಬ್ದ ಮಾಲಿನ್ಯದಿಂದ ಇತರ ಆರೋಗ್ಯದ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ. ಮೆರವಣಿಗೆ ಸಾಗುವ ಹಾದಿಯಲ್ಲಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‌ಗಳು ಇರಲಿವೆ. ಚಿಕಿತ್ಸೆಗೆ ದಾಖಲಾಗಿರುವ ಅನಾರೋಗ್ಯ ಪೀಡಿತರ ಮೇಲೆ ಡಿಜೆ ಸೌಂಡಿನಿಂದ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚಿದೆ ಎಂದು ದೂರಿದ್ದಾರೆ.

ಡಿಜೆ ನಿರ್ಬಂಧಿಸಿ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ಜಾನಪದ ಕಲೆಗಳಾದ ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ, ನಂದಿ ಕಂಬ, ಯಕ್ಷಗಾನ ಹಾಗೂ ಇನ್ನಿತರಕಲಾ ತಂಡಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಅಧಿಕ್ಷಕರಲ್ಲಿ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

8 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

14 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

15 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

21 hours ago