ಮಂಡ್ಯ: ಶಾಸಕ ಎಚ್.ಡಿ ರೇವಣ್ಣ ಒಳ್ಳೆ ನಡವಳಿಕೆಯ ವ್ಯಕ್ತಿಯಲ್ಲ. ಆತನ ವರ್ತನೆ ಸರಿಯಿಲ್ಲ ಹಿಂದೆ ಲಂಡನ್ ಹೋಗಿದ್ದಾಗಲೂ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕೊಂಡಿದ್ದರು ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಇಷ್ಟೆಲ್ಲಾ ದೌರ್ಜನ್ಯ ನಡೆಸುತ್ತಿದ್ದರು, ಅವರ ತಂದೆ ತಾಯಿ ಏನು ಕತ್ತೆ ಕಾಯುತ್ತಿದ್ದರಾ? ಎಂದು ಪ್ರಶ್ನೆ ಮಾಡಿರುವ ಅವರು, ಸರ್ಕಾರ ಇವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.
ಸರ್ಕಾರ ಪೆನ್‌ಡ್ರೈವ್ ಸಾರ್ವಜನಿಕರ ಕೈ ಸೇರದಂತೆ ನೋಡಿಕೊಳ್ಳಬೇಕು ಹಾಗೂ ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು. ಮತ್ತು ಚುನಾವನಾ ಇಲಾಖೆ ರೇವಣ್ಣ ಗೆದ್ದರೇ ಆತ ರಾಜೀನಾಮೆ ನೀಡಬೇಕು ಇಲ್ಲದಿದ್ದಲ್ಲಿ ಫಲಿತಾಂಶಕ್ಕೆ ತಡೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಬಿಜೆಪಿಯ ಬಾಯಿ ಕಟ್ಟಿಹಾಕಿದಂತಾಗಿದೆ. ಈ ಪೆನ್‌ಡ್ರೈವ್ ಪ್ರಕರಣದಿಂದ ಬಿಜೆಪಿಗೂ ಹಿನ್ನಡೆಯಾಗುವ ಸಂಭವವಿದ್ದು, ಕೂಡಲೇ ಎನ್‌ಡಿಎ ಕೂಟದಿಂದ ಜೆಡಿಎಸ್ ಪಕ್ಷವನ್ನು ತೆಗೆದುಹಾಕಿ ಅವರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…