sewerage works to be launched
ಮಂಡ್ಯ : 1.50 ಕೋಟಿ ರೂ ವೆಚ್ಚದ ನಗರದ ಚೀರನಹಳ್ಳಿ-ಹಾಲಹಳ್ಳಿ ಸಂಪರ್ಕ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ದ್ವಾರಕಾನಗರ ಮತ್ತು ಚೀರನಹಳ್ಳಿ ಗ್ರಾಮವು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ದ್ವಾರಕಾ ನಗರದ ನಿವಾಸಿಗಳಿಗೆ ಸಮರ್ಪಕ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ಬಂದಾಗ ಈ ರಸ್ತೆಯಲ್ಲಿ ಓಡಾಡಲು ಬಹಳ ತೊಂದರೆ ಆಗಿದೆ ಎಂದು ಮುಖಂಡರು ತಿಳಿಸಿದ್ದರು.
ಹಾಗಾಗಿ ಸರ್ಕಾರದಿಂದ 1.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ದ್ವಾರಕಾ ನಗರದ ನಿವಾಸಿಗಳಿಗೆ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
ಈ ವೇಳೆ ಅರಕೆರೆ ಸಂತೋಷ್, ಬೇಲೂರು ಸೋಮ, ಮಹೇಶ್, ಶಶಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…