Mysore
21
broken clouds

Social Media

ಗುರುವಾರ, 13 ಮಾರ್ಚ್ 2025
Light
Dark

ಕೆ.ಆರ್.ಪೇಟೆಯಲ್ಲಿ ಕಬ್ಬಿಣದ ಅಂಗಡಿಯ ಗೋಡೆ ಹೊಡೆದು ಕಳ್ಳತನ

ಮಂಡ್ಯ: ಕಬ್ಬಿಣದ ಅಂಗಡಿಯ ಗೋಡೆ ಹೊಡೆದು ಖದೀಮರು ತಮ್ಮ ಕೈಚಳಕ ತೋರಿಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.

ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿರುವ ಕಬ್ಬಿಣದ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಮುಸುಕುದಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದೆ. ಕಳ್ಳರ ಕೈಚಳಕ ಅಂಗಡಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೆ.ಆರ್.ಪೇಟೆ ಪಟ್ಟಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಈ ಭಾಗದಲ್ಲಿ ಖದೀಮರ ಹಾವಳಿ ಹೆಚ್ಚಾಗಿದೆ. ಆದರೂ ಪೊಲೀಸರು ಇದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪೊಲೀಸರ ವಿರುದ್ಧವೇ ಕಿಡಿಕಾರಿದ್ದಾರೆ.

Tags: