Mysore
29
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಮಂಡ್ಯ ಅಭಿವೃಧ್ದಿಗೆ 2000 ಕೋಟಿ ರೂ ಅನುದಾನ : ಡಿಸಿಎಂ ಡಿ.ಕೆ ಶಿವಕುಮಾರ್

ಮಂಡ್ಯ : ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ 2000 ಕೋಟಿ ರೂ ಅನುದಾನ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ತಿಳಿಸಿದರು.

ಮಳವಳ್ಳಿ ತಾಲ್ಲೂಕಿನಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ತಾಯಿ ಜನ್ಮ ನೀಡಿದರೆ, ಕಾವೇರಿ ತಾಯಿ ತನ್ನ ಉಗಮ ಸ್ಥಾನ ಕೊಡಗಿನಿಂದ ಸಮುದ್ರ ಸೇರುವ ಕೊನೆಯ ಭಾಗದವರೆಗೆ ಜನರಿಗೆ ಜೀವನ ಕಟ್ಟಿಕೊಟ್ಟಿಗದೆ, ಕೃಷಿ, ಕೈಗಾರಿಕೆ, ವಿದ್ಯುಚ್ಛಕ್ತಿ, ಮೀನುಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರದವರಿಗೆ ಜೀವನ ಕಟ್ಟಿಕೊಟ್ಟಿದೆ.ಇಂತಹ ಕಾವೇರಿ ಮಾತೆಗೆ ಪ್ರಾರ್ಥನೆ ಹಾಗೂ ಆರತಿ ಸಲ್ಲಿಸಲು ಯೋಜನೆ ರೂಪಿಸಲಾಗಿದೆ. ಕೆಲವು ಕಾನೂನು ನಿರ್ಬಂಧಗಳಿಗೆ ತಡವಾಗಿದೆ ಎಂದರು.

ಮಳವಳ್ಳಿಯಲ್ಲಿರುವ ಶಿವನಸಮುದ್ರ ಇಡೀ ಎಷಿಯಾ ಭಾಗಕ್ಕೆ ಮೊದಲು‌ ವಿದ್ಯುಚ್ಛಕ್ತಿ ನೀಡಿರುವ ಕೀರ್ತಿ ಸಲ್ಲುತ್ತದೆ‌ ಇಂತಹ ಭಾಗವು ವಿದ್ಯಾರ್ಥಿಗಳು ಹಾಗೂ ಮಕ್ಕಳಿಗೆ ಚಿರಪರಿಚಿತವಾಗಬೇಕು. ಈ ಹಿನ್ನಲೆಯಲ್ಲಿ ‌ಪ್ರವಾಸೋದ್ಯಮ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಸದರಿ ಕ್ಷೇತ್ರ ಭೀಟಿ ಕಾರ್ಯಕ್ರಮವನ್ನು ಯೋಜಿಸಲಾಗುವುದು ಎಂದರು.

ಮಂಡ್ಯ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆ ರೈತರ ಜಿಲ್ಲೆಯಾಗಿದ್ದು, ಈ ಎರಡು ಜಿಲ್ಲೆಗಳು ನನ್ನ ಎರಡು ಕಣ್ಣುಗಳಿದ್ದ ಆಗೆ. ನಾಲೆಗಳ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.

ಮಳವಳ್ಳಿ ಶಾಸಕರು ಬ್ಲಫ್ ಭಾಗದಲ್ಲಿರುವ ಸೇತುವೆ ಅಭಿವೃದ್ಧಿ ಮಾಡಿಕೊಡಬೇಕು ಎಂದು ಸಲ್ಲಿಸಿರುವ ಮನವಿಯನ್ನು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಂಡು ಅಭಿವೃದ್ಧಿ ಗೊಳಿಸಿಕೊಡುವುದಾಗಿ ಭರವಸೆ ನೀಡಿದರು.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಮಾತನಾಡಿ, ರಾಜ್ಯ ಸರ್ಕಾರ ಜನ ಪರವಾದ ಕಾರ್ಯಕ್ರಮ ಮತ್ತು ಅಭಿವೃದ್ಧಿ ಕೆಲಸವನ್ನು ಮಾಡುತ್ತಿದೆ. ನೀರಾವರಿಯಲ್ಲಿ ಭದ್ರ, ಕೆ.ಆರ್.ಎಸ್ ಸೇರಿ ಎಲ್ಲಾ ಡ್ಯಾಂಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಬೆಂಗಳೂರು ರಸ್ತೆ, ಟನಲ್ ಗಳು ಸೇರಿದಂತೆ ಹಲವಾರು ಕೆಲಸ ಮಾಡುವ ಪ್ರಯತ್ನವನ್ನು ಮಾನ್ಯ ಉಪ ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ‌. ಅಭಿವೃದ್ಧಿ ಕೆಲಸಗಳ ಫಲ ಮುಂದಿನ ದಿನಗಳಲ್ಲಿ ಸಾರ್ವಜನಿಕರು ನೋಡಲಿದ್ದಾರೆ ಎಂದರು.

ರಾಜ್ಯದಲ್ಲಿ ಯುರಿಯಾ, ಬಿತ್ತನೆ ಬೀಜ ಸೇರಿದಂತೆ ಯಾವುದೇ ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ ಎಂದರು.

ಮಳವಳ್ಳಿ ಶಾಸಕ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅವರು ಮಾತನಾಡಿ ಪರಿಸರ ತಾಣದ ಅಭಿವೃದ್ಧಿ ಯೊಂದಿಗೆ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಜಲಪಾತೋತ್ಸವ ಕಾರ್ಯಕ್ರಮವನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ ಎಂದರು.

ನಾಲಾ ಆಧುನೀಕರಣಕ್ಕೆ ಸಚಿವ ಸಂಪುಟದಲ್ಲಿ 300 ಕೋಟಿ ಅನುದಾನ ಮಂಜೂರು ಮಾಡಿಕೊಡಲಾಗಿದೆ ಇದಕ್ಕೆ ಮಾನ್ಯ ಉಪಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ‌ . ಬ್ಲಫ್ ಗೆ ಸಂಚಾರಕ್ಕಾಗಿ ಮೇಲುಸೇತುವೆ ನಿರ್ಮಾಣ ಮಾಡಿಕೊಡುವಂತೆ ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪೂರಿಗಾಲಿ ಹನಿ ನೀರಾವರಿ ಕಾಮಗಾರಿ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿ ಉದ್ಘಾಟನೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ. ಶಿವಕುಮಾರ್, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿ ಕುಮಾರ್, ಸ್ಟಾರ್ ಚಂದ್ರು, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Tags:
error: Content is protected !!