ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ.
ಎಸ್.ಎಂ.ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ ಸುಮಾರು 2.30 ಗಂಟೆಗೆ ನಿಧನರಾಗಿದ್ದು, ಇಂದು(ಡಿ.11) ಅವರ ಹುಟ್ಟೂರಾಗಿರುವ ಸೋಮನಹಳ್ಳಿಯಲ್ಲಿ ಮಧ್ಯಾಹ್ನ 3 ಗಂಟೆಯ ನಂತರ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನಡೆಯಲಿದೆ. ಅಲ್ಲದೇ ಮೃತರ ಅಂತ್ಯ ಸಂಸ್ಕಾರವನ್ನು ಒಕ್ಕಲಿಗ ಸಂಪ್ರದಾಯದಂತೆ ಮಾಡಲಾಗುತ್ತಿದ್ದು, ಸುಮಾರು 1,000 ಕೆ.ಜಿ.ಯಷ್ಟು ಶ್ರೀಗಂಧದ ಕಟ್ಟಿಗೆಗಳನ್ನು ಅರಣ್ಯ ಇಲಾಖೆಯಿಂದ ಪೂರೈಕೆ ಮಾಡಲಾಗಿದೆ. ಬಳಿಕ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವರು, ಶಾಸಕರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾಡಳಿತ ಹಾಗೂ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಪೊಲೀಸ್ ಇಲಾಖೆಯೂ ಪ್ರಮುಖ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…