Mysore
25
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ.

ಮಂಡ್ಯ: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ಹುಟ್ಟೂರು ಆಗಿರುವ ಸೋಮನಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

ಎಸ್‌.ಎಂ.ಕೃಷ್ಣ ಅವರು ಇಂದು(ಡಿ.10) ಬೆಳಿಗ್ಗೆ ಸುಮಾರು 2.30 ಗಂಟೆಗೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಎಂಕೆ ಅವರಿಗೆ ಸಕಲ ಸರ್ಕಾರಿ ಗೌರವ ಸಿದ್ಧತೆಗಳೊಂದಿಗೆ ಅಂತಿಮ ವಿಧಿ-ವಿಧಾನಗಳನ್ನು ನಡೆಸಲು ತೀರ್ಮಾನಿಸಿದೆ. ಹೀಗಾಗಿ ಕುಟುಂಬಸ್ಥರ ನಿರ್ಧಾರದ ಮೇರೆಗೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬೆಂಗಳೂರು-ಮೈಸೂರು ಹೆದ್ದಾರಿಯ ಸೋಮನಹಳ್ಳಿ ಕಾಫಿ ಡೇ ಹತ್ತಿರವಿರುವ ಖಾಲಿ ಜಾಗದಲ್ಲಿ ಹಿಂದೂ ಸಂಪ್ರದಾಯದಂತೆ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರವನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಆದೇಶದ ಮೇರೆಗೆ ಮಂಡ್ಯ ಜಿಲ್ಲಾಡಳಿತ ಹಾಗೂ ಮದ್ದೂರು ತಾಲ್ಲೂಕು ಆಡಳಿತದ ಜೊತೆ ಅಂತ್ಯ ಸಂಸ್ಕಾರ ಸ್ಥಳದಲ್ಲಿ ವಾಸ್ತವ ಹೂಡಿ ಸಂಪೂರ್ಣ ಜವಾಬ್ದಾರಿಯಿಂದ ಸಕಲ ಸಿದ್ಧತೆಯ ನೇತೃತ್ವ ವಹಿಸಿಕೊಳ್ಳಲಾಗಿದೆ. ಅಲ್ಲದೇ ಅಂತಿಮ ದರ್ಶನಕ್ಕೆ ಬರುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಸಕಲ ಸಿದ್ಧತೆಗಳ ಜೊತೆಗೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಚಲುವರಾಯಸ್ವಾಮಿ ಹಾಗೂ ಜಿಲ್ಲಾಡಳಿತ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!