ಮಂಡ್ಯ: ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ ಧನ್ಯವಾದ. ಮುಖ್ಯವಾಗಿ 12 ಜನ ನಿರ್ದೇಶಕರಿಗೂ ಧನ್ಯವಾದ ತಿಳಿಸಿದರು.
ಶಂಕರೇಗೌಡರು ಹಾಗೂ ಚೌಡೇಗೌಡರು ಸ್ಥಾಪಿಸಿದ ಸಂಸ್ಥೆ ಡಿ.ಸಿ.ಸಿ ಬ್ಯಾಂಕ್. ಅಲ್ಲಿಂದಲೂ ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಜೋಗಿಗೌಡರು ಸಹ ಉತ್ತಮ ಕಾರ್ಯಗಳನ್ನು ರೂಪಿಸಿಕೊಂಡು ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಸಿ.ಸಿ ಬ್ಯಾಂಕ್ ನ ಎಲ್ಲಾ ಸಿಬ್ಬಂದಿ ವರ್ಗದ ಜೊತೆ ಸಮನ್ವಯ ಸಾಧಿಸಿ ಉತ್ತಮ ಕೆಲಸ ಮಾಡಲಾಗುವುದು ಎಂದರು.
ಇದನ್ನು ಓದಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಸುಪ್ರೀಂಕೋರ್ಟ್ ಕದ ತಟ್ಟಿದ ಮಾಜಿ ಸಿಎಂ ಯಡಿಯೂರಪ್ಪ
ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ನರೇಂದ್ರ ಸ್ವಾಮಿಯವರು ಮಾತನಾಡಿ, ಮೊದಲನೇ ಬಾರಿಗೆ ಹೆಚ್ಚಿನ ಬಹುಮತ ಪಡೆದು ಒಮ್ಮತ ನಿರ್ಧಾರಕ್ಕೆ ಬಂದು ಒಗ್ಗಟ್ಟನ್ನು ಸಾಧಿಸಿದ್ದೇವೆ. ಈ ಒಗ್ಗಟ್ಟು ಸಾಧಿಸಲು ಸಹಕಾರಿಯಾದ ಎಲ್ಲಾ ನಾಯಕರಿಗೆ ಇದರ ಕೀರ್ತಿ ಸಲ್ಲುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಸಹಕಾರಿಗಳಿಗೆ, ರೈತ ಪರ ಚಿಂತನೆಯ ಜೊತೆಗೆ ಕೈಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಡಿ.ಸಿ.ಸಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತದೆ. ಡಿ.ಸಿ.ಸಿ ಬ್ಯಾಂಕ್ ನ ನೂತನವಾಗಿ ಅಧ್ಯಕ್ಷ ಸಚಿನ್ ಹಾಗೂ ಉಪಾಧ್ಯಕ್ಷರಾದ ಚಲುವರಾಜ್ ಅವರಿಗೆ ಅಭಿನಂದನೆ ತಿಳಿಸಿದರು.
ಇದನ್ನು ಓದಿ: ಎಂಡಿಸಿಸಿಬಿ ಅಧ್ಯಕ್ಷರಾಗಿ ಸಚ್ಚಿನ್ ಆಯ್ಕೆ ಖಚಿತ
ಉಪವಿಭಾಗಾಧಿಕಾರಿ ಶಿವಮೂರ್ತಿ ಅವರು ಮಾತನಾಡಿ, ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಸಿ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚಲುವರಾಜ್ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಪರಿಶೀಲಿಸಿ ನಾಮಪತ್ರವನ್ನು ಅಂಗೀಕರಿಸಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ 5 ವರ್ಷದ ಅವಧಿ ಅಧ್ಯಕ್ಷರಾಗಿ ಸಚಿನ್ ಮಾತು ಉಪಾಧ್ಯಕ್ಷರಾಗಿ ಚೆಲುವರಾಜ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…